Home Bibles ಅಪೋಸ್ತಲರ ಕೃತ್ಯಗಳು 11:14 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 11:14 · ಕನ್ನಡ ಬೈಬಲ್

ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.

Cross references

ಆದಿಕಾಂಡ 17:7

ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.

ಆದಿಕಾಂಡ 18:19

ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

ಕೀರ್ತನೆಗಳು 19:7

ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಕೀರ್ತನೆಗಳು 103:17

ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ

ಕೀರ್ತನೆಗಳು 112:2

ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.

ಕೀರ್ತನೆಗಳು 115:13

ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.

ಸಾಮೇತಿಗಳು 20:7

ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.

ಯೆಶಾಯ 61:8

ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಮಾರ್ಕ 16:16

ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಲೂಕ 19:10

ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

ಯೋಹಾನ 4:53

ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.

ಯೋಹಾನ 6:63

ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.

ಯೋಹಾನ 6:68

ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.

ಯೋಹಾನ 12:50

ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.

ಯೋಹಾನ 20:31

ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ಅಪೋಸ್ತಲರ ಕೃತ್ಯಗಳು 2:39

ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 10:2

ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.

ಅಪೋಸ್ತಲರ ಕೃತ್ಯಗಳು 10:6

ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 10:22

ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ

ಅಪೋಸ್ತಲರ ಕೃತ್ಯಗಳು 10:32

ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 10:43

ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

ಅಪೋಸ್ತಲರ ಕೃತ್ಯಗಳು 16:15

ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

ಅಪೋಸ್ತಲರ ಕೃತ್ಯಗಳು 16:31

ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 18:8

ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 10:9

ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

1 ಕೊರಿಂಥದವರಿಗೆ 1:16

ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.

1 ಯೋಹಾನ 5:9

ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.

Interlinear

Choose Theme