Home Bibles ಅಪೋಸ್ತಲರ ಕೃತ್ಯಗಳು 11:18 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 11:18 · ಕನ್ನಡ ಬೈಬಲ್

ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

Cross references

ಲೇವ್ಯಕಾಂಡ 10:19

ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.

ಯೆಹೋಶುವ 22:30

ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್‌ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.

ಯೆಶಾಯ 60:21

ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.

ಯೆಶಾಯ 61:3

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೆರೆಮಿಯ 31:18

ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.

ಯೆಹೆಜ್ಕೇಲ 36:26

ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.

ಜೆಕರ್ಯ 12:10

ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಅಪೋಸ್ತಲರ ಕೃತ್ಯಗಳು 3:19

ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೋಸ್ತಲರ ಕೃತ್ಯಗಳು 3:26

ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 5:31

ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 11:1

ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.

ಅಪೋಸ್ತಲರ ಕೃತ್ಯಗಳು 13:47

ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

ಅಪೋಸ್ತಲರ ಕೃತ್ಯಗಳು 14:27

ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

ಅಪೋಸ್ತಲರ ಕೃತ್ಯಗಳು 15:3

ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಅಪೋಸ್ತಲರ ಕೃತ್ಯಗಳು 21:20

ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

ಅಪೋಸ್ತಲರ ಕೃತ್ಯಗಳು 22:21

ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

ಅಪೋಸ್ತಲರ ಕೃತ್ಯಗಳು 26:17

ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ರೋಮಾಪುರದವರಿಗೆ 3:29

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;

ರೋಮಾಪುರದವರಿಗೆ 9:30

ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

ರೋಮಾಪುರದವರಿಗೆ 10:12

ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

ರೋಮಾಪುರದವರಿಗೆ 15:9

ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.

2 ಕೊರಿಂಥದವರಿಗೆ 3:18

ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

2 ಕೊರಿಂಥದವರಿಗೆ 7:10

ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

ಗಲಾತ್ಯದವರಿಗೆ 1:24

ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

ಗಲಾತ್ಯದವರಿಗೆ 3:26

ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.

ಎಫೆಸದವರಿಗೆ 2:11

ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.

ಎಫೆಸದವರಿಗೆ 3:5

ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.

2 ತಿಮೋಥೆಯ 2:25

ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

ಯಾಕೋಬ 1:16

ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.

Interlinear

Choose Theme