Home Bibles ☰ Books ಅಪೋಸ್ತಲರ ಕೃತ್ಯಗಳು 11:2 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 11:2 · ಕನ್ನಡ ಬೈಬಲ್

ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--

Cross references

ಅಪೋಸ್ತಲರ ಕೃತ್ಯಗಳು 10:9

ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

ಅಪೋಸ್ತಲರ ಕೃತ್ಯಗಳು 10:45

ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.

ಅಪೋಸ್ತಲರ ಕೃತ್ಯಗಳು 15:1

ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.

ಅಪೋಸ್ತಲರ ಕೃತ್ಯಗಳು 15:5

ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.

ಅಪೋಸ್ತಲರ ಕೃತ್ಯಗಳು 21:20

ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

ಗಲಾತ್ಯದವರಿಗೆ 2:12

ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

Interlinear

Choose Theme