Home Bibles ಅಪೋಸ್ತಲರ ಕೃತ್ಯಗಳು 12:25 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 12:25 · ಕನ್ನಡ ಬೈಬಲ್

ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.

Cross references

ಅಪೋಸ್ತಲರ ಕೃತ್ಯಗಳು 4:36

ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಪೋಸ್ತಲರ ಕೃತ್ಯಗಳು 11:29

ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 12:12

ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.

ಅಪೋಸ್ತಲರ ಕೃತ್ಯಗಳು 13:1

ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

ಅಪೋಸ್ತಲರ ಕೃತ್ಯಗಳು 15:37

ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

1 ಪೇತ್ರ 5:13

ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

Interlinear

Choose Theme