Home Bibles ಅಪೋಸ್ತಲರ ಕೃತ್ಯಗಳು 14:16 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 14:16 · ಕನ್ನಡ ಬೈಬಲ್

ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;

Cross references

ಕೀರ್ತನೆಗಳು 81:12

ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.

ಕೀರ್ತನೆಗಳು 147:20

ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.

ಹೊಶೇಯ 4:17

ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.

ಮೀಕ 4:5

ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.

ಅಪೋಸ್ತಲರ ಕೃತ್ಯಗಳು 17:30

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ರೋಮಾಪುರದವರಿಗೆ 1:21

ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

ರೋಮಾಪುರದವರಿಗೆ 1:28

ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.

ಎಫೆಸದವರಿಗೆ 2:12

ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.

1 ಪೇತ್ರ 4:3

ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

Interlinear

Choose Theme