ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
Cross references
ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.