ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
Cross references
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.