ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
Cross references
ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.