ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
Cross references
ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ