ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
Cross references
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.