Home Bibles ಅಪೋಸ್ತಲರ ಕೃತ್ಯಗಳು 19:33 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 19:33 · ಕನ್ನಡ ಬೈಬಲ್

ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.

Cross references

ಲೂಕ 1:22

ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.

ಅಪೋಸ್ತಲರ ಕೃತ್ಯಗಳು 12:17

ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.

ಅಪೋಸ್ತಲರ ಕೃತ್ಯಗಳು 13:16

ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.

ಅಪೋಸ್ತಲರ ಕೃತ್ಯಗಳು 21:40

ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--

ಅಪೋಸ್ತಲರ ಕೃತ್ಯಗಳು 24:10

ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;

ಅಪೋಸ್ತಲರ ಕೃತ್ಯಗಳು 26:1

ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--

ಫಿಲಿಪ್ಪಿಯವರಿಗೆ 1:7

ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

1 ತಿಮೋಥೆಯ 1:20

ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

2 ತಿಮೋಥೆಯ 4:14

ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.

Interlinear

Choose Theme