ಅಪೋಸ್ತಲರ ಕೃತ್ಯಗಳು 19:36 · ಕನ್ನಡ ಬೈಬಲ್
ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
Cross references
ಸಾಮೇತಿಗಳು 14:29
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಸಾಮೇತಿಗಳು 25:8
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಅಪೋಸ್ತಲರ ಕೃತ್ಯಗಳು 5:35
ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.