Home Bibles ಅಪೋಸ್ತಲರ ಕೃತ್ಯಗಳು 20:22 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 20:22 · ಕನ್ನಡ ಬೈಬಲ್

ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.

Cross references

ಲೂಕ 9:51

ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು

ಲೂಕ 12:50

ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!

ಲೂಕ 18:31

ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಯೋಹಾನ 13:1

ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.

ಯೋಹಾನ 18:4

ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು

ಅಪೋಸ್ತಲರ ಕೃತ್ಯಗಳು 17:16

ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.

ಅಪೋಸ್ತಲರ ಕೃತ್ಯಗಳು 19:21

ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್‌ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 20:16

ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.

ಅಪೋಸ್ತಲರ ಕೃತ್ಯಗಳು 21:11

ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ

2 ಕೊರಿಂಥದವರಿಗೆ 5:14

ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

ಯಾಕೋಬ 4:14

ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.

2 ಪೇತ್ರ 1:14

ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.

Interlinear

Choose Theme