ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
Cross references
ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.