Home Bibles ಅಪೋಸ್ತಲರ ಕೃತ್ಯಗಳು 21:14 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 21:14 · ಕನ್ನಡ ಬೈಬಲ್

ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.

Cross references

ಆದಿಕಾಂಡ 43:14

ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.

1 ಸಮುವೇಲ 3:18

ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.

2 ಸಮುವೇಲ 15:25

ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.

2 ಅರಸುಗಳು 20:19

ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.

ಮತ್ತಾಯ 6:10

ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.

ಮತ್ತಾಯ 26:39

ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.

ಮತ್ತಾಯ 26:42

ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.

ಲೂಕ 11:2

ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.

ಲೂಕ 22:42

ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.

Interlinear

Choose Theme