ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
Cross references
ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.