Home Bibles ಅಪೋಸ್ತಲರ ಕೃತ್ಯಗಳು 22:7 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 22:7 · ಕನ್ನಡ ಬೈಬಲ್

ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.

Cross references

ಆದಿಕಾಂಡ 3:9

ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.

ಆದಿಕಾಂಡ 16:8

ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.

ಆದಿಕಾಂಡ 22:1

ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.

ಆದಿಕಾಂಡ 22:11

ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.

ನಿರ್ಗಮಕಾಂಡ 3:4

ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.

1 ಸಮುವೇಲ 3:10

ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.

ಯೆಶಾಯ 43:22

ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

ಯೆರೆಮಿಯ 2:5

ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?

ಯೆರೆಮಿಯ 2:9

ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.

ಮತ್ತಾಯ 25:45

ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಮತ್ತಾಯ 27:23

ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

Interlinear

Choose Theme