Home Bibles ಅಪೋಸ್ತಲರ ಕೃತ್ಯಗಳು 25:13 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 25:13 · ಕನ್ನಡ ಬೈಬಲ್

ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.

Cross references

1 ಸಮುವೇಲ 13:10

ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.

1 ಸಮುವೇಲ 25:14

ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.

2 ಸಮುವೇಲ 8:10

ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.

2 ಅರಸುಗಳು 10:13

ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.

ಮಾರ್ಕ 15:18

ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.

ಅಪೋಸ್ತಲರ ಕೃತ್ಯಗಳು 8:40

ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

ಅಪೋಸ್ತಲರ ಕೃತ್ಯಗಳು 25:22

ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.

ಅಪೋಸ್ತಲರ ಕೃತ್ಯಗಳು 26:1

ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--

ಅಪೋಸ್ತಲರ ಕೃತ್ಯಗಳು 26:27

ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.

Interlinear

Choose Theme