Home Bibles ಅಪೋಸ್ತಲರ ಕೃತ್ಯಗಳು 26:1 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 26:1 · ಕನ್ನಡ ಬೈಬಲ್

ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--

Cross references

ಸಾಮೇತಿಗಳು 1:24

ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

ಸಾಮೇತಿಗಳು 18:13

ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.

ಸಾಮೇತಿಗಳು 18:17

ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.

ಯೆಹೆಜ್ಕೇಲ 16:27

ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.

ಯೋಹಾನ 7:51

ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.

ಅಪೋಸ್ತಲರ ಕೃತ್ಯಗಳು 9:15

ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.

ಅಪೋಸ್ತಲರ ಕೃತ್ಯಗಳು 22:1

ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.

ಅಪೋಸ್ತಲರ ಕೃತ್ಯಗಳು 25:16

ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ

ಅಪೋಸ್ತಲರ ಕೃತ್ಯಗಳು 26:2

ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.

ರೋಮಾಪುರದವರಿಗೆ 10:21

ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.

Interlinear

Choose Theme