ಅಪೋಸ್ತಲರ ಕೃತ್ಯಗಳು 27:36 · ಕನ್ನಡ ಬೈಬಲ್
ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.
Cross references
ಕೀರ್ತನೆಗಳು 27:14
ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಅಪೋಸ್ತಲರ ಕೃತ್ಯಗಳು 27:22
ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
ಅಪೋಸ್ತಲರ ಕೃತ್ಯಗಳು 27:25
ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
2 ಕೊರಿಂಥದವರಿಗೆ 1:4
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.