ಅಪೋಸ್ತಲರ ಕೃತ್ಯಗಳು 28:29 · ಕನ್ನಡ ಬೈಬಲ್
ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.
Cross references
ಮತ್ತಾಯ 10:34
ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
ಲೂಕ 12:51
ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
ಯೋಹಾನ 7:40
ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
ಅಪೋಸ್ತಲರ ಕೃತ್ಯಗಳು 28:25
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--