Home Bibles ಅಪೋಸ್ತಲರ ಕೃತ್ಯಗಳು 3:15 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 3:15 · ಕನ್ನಡ ಬೈಬಲ್

ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.

Cross references

ಮತ್ತಾಯ 28:2

ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.

ಯೋಹಾನ 1:4

ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.

ಯೋಹಾನ 4:10

ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.

ಯೋಹಾನ 4:14

ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.

ಯೋಹಾನ 5:26

ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.

ಯೋಹಾನ 10:28

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.

ಯೋಹಾನ 11:25

ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಯೋಹಾನ 17:2

ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.

ಅಪೋಸ್ತಲರ ಕೃತ್ಯಗಳು 1:22

ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.

ಅಪೋಸ್ತಲರ ಕೃತ್ಯಗಳು 2:24

ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.

ಅಪೋಸ್ತಲರ ಕೃತ್ಯಗಳು 2:32

ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.

ಅಪೋಸ್ತಲರ ಕೃತ್ಯಗಳು 5:31

ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 10:40

ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.

ಅಪೋಸ್ತಲರ ಕೃತ್ಯಗಳು 13:30

ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

ರೋಮಾಪುರದವರಿಗೆ 8:1

ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

1 ಕೊರಿಂಥದವರಿಗೆ 15:45

ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.

ಎಫೆಸದವರಿಗೆ 1:20

ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ

ಕೊಲೊಸ್ಸೆಯವರಿಗೆ 3:3

ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

ಹೆಬ್ರಿಯರಿಗೆ 2:10

ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

ಹೆಬ್ರಿಯರಿಗೆ 5:9

ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.

1 ಯೋಹಾನ 5:11

ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.

1 ಯೋಹಾನ 5:20

ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್‌.

ಪ್ರಕಟನೆ 21:6

ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.

ಪ್ರಕಟನೆ 22:1

ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.

ಪ್ರಕಟನೆ 22:17

ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.

Interlinear

Choose Theme