Home Bibles ಅಪೋಸ್ತಲರ ಕೃತ್ಯಗಳು 3:23 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 3:23 · ಕನ್ನಡ ಬೈಬಲ್

ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.

Cross references

ಲೇವ್ಯಕಾಂಡ 23:29

ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.

ದ್ವಿತೀಯೋಪದೇಶಕಾಂಡ 18:19

ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.

ಮಾರ್ಕ 16:16

ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಯೋಹಾನ 3:18

ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

ಯೋಹಾನ 8:24

ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

ಯೋಹಾನ 12:48

ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.

ಅಪೋಸ್ತಲರ ಕೃತ್ಯಗಳು 13:38

ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

2 ತೆಸಲೋನಿಕದವರಿಗೆ 1:7

ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ

ಹೆಬ್ರಿಯರಿಗೆ 2:3

ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಹೆಬ್ರಿಯರಿಗೆ 10:28

ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

ಹೆಬ್ರಿಯರಿಗೆ 10:39

ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.

ಹೆಬ್ರಿಯರಿಗೆ 12:25

ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

ಪ್ರಕಟನೆ 13:8

ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.

ಪ್ರಕಟನೆ 20:15

ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

Interlinear

Choose Theme