Home Bibles ಅಪೋಸ್ತಲರ ಕೃತ್ಯಗಳು 5:24 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 5:24 · ಕನ್ನಡ ಬೈಬಲ್

ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.

Cross references

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 53:1

ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?

ದಾನಿಯೇಲ 2:34

ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ಜೆಕರ್ಯ 6:12

ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.

ಮಾರ್ಕ 4:30

ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?

ಲೂಕ 22:4

ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.

ಲೂಕ 22:52

ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?

ಯೋಹಾನ 11:47

ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?

ಯೋಹಾನ 12:19

ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.

ಅಪೋಸ್ತಲರ ಕೃತ್ಯಗಳು 2:12

ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.

ಅಪೋಸ್ತಲರ ಕೃತ್ಯಗಳು 4:1

ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;

ಅಪೋಸ್ತಲರ ಕೃತ್ಯಗಳು 4:16

ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.

ಅಪೋಸ್ತಲರ ಕೃತ್ಯಗಳು 4:21

ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.

ಅಪೋಸ್ತಲರ ಕೃತ್ಯಗಳು 5:26

ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.

Interlinear

Choose Theme