Home Bibles ಅಪೋಸ್ತಲರ ಕೃತ್ಯಗಳು 5:42 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 5:42 · ಕನ್ನಡ ಬೈಬಲ್

ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.

Cross references

2 ಸಮುವೇಲ 6:22

ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.

ಲೂಕ 21:37

ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.

ಲೂಕ 22:53

ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.

ಅಪೋಸ್ತಲರ ಕೃತ್ಯಗಳು 2:46

ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.

ಅಪೋಸ್ತಲರ ಕೃತ್ಯಗಳು 3:1

ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.

ಅಪೋಸ್ತಲರ ಕೃತ್ಯಗಳು 4:20

ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 4:29

ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

ಅಪೋಸ್ತಲರ ಕೃತ್ಯಗಳು 5:20

ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 8:5

ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.

ಅಪೋಸ್ತಲರ ಕೃತ್ಯಗಳು 8:35

ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.

ಅಪೋಸ್ತಲರ ಕೃತ್ಯಗಳು 9:20

ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.

ಅಪೋಸ್ತಲರ ಕೃತ್ಯಗಳು 11:20

ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.

ಅಪೋಸ್ತಲರ ಕೃತ್ಯಗಳು 17:3

ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.

ಅಪೋಸ್ತಲರ ಕೃತ್ಯಗಳು 17:18

ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ಅಪೋಸ್ತಲರ ಕೃತ್ಯಗಳು 20:20

ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ

ರೋಮಾಪುರದವರಿಗೆ 1:15

ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.

1 ಕೊರಿಂಥದವರಿಗೆ 2:2

ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.

ಗಲಾತ್ಯದವರಿಗೆ 6:14

ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.

ಎಫೆಸದವರಿಗೆ 4:20

ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.

2 ತಿಮೋಥೆಯ 4:2

ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

Interlinear

Choose Theme