Home Bibles ಅಪೋಸ್ತಲರ ಕೃತ್ಯಗಳು 6:10 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 6:10 · ಕನ್ನಡ ಬೈಬಲ್

ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.

Cross references

ನಿರ್ಗಮಕಾಂಡ 4:12

ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.

ಯೋಬ 32:8

ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.

ಯೋಬ 32:18

ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.

ಯೆಶಾಯ 54:17

ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.

ಯೆರೆಮಿಯ 1:18

ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 15:20

ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.

ಯೆಹೆಜ್ಕೇಲ 3:27

ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.

ಮೀಕ 3:8

ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

ಮತ್ತಾಯ 10:19

ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.

ಲೂಕ 1:17

ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.

ಲೂಕ 12:11

ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.

ಲೂಕ 21:15

ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.

ಯೋಹಾನ 7:46

ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.

ಅಪೋಸ್ತಲರ ಕೃತ್ಯಗಳು 5:39

ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 7:51

ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

1 ಕೊರಿಂಥದವರಿಗೆ 2:4

ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

Interlinear

Choose Theme