ಅಪೋಸ್ತಲರ ಕೃತ್ಯಗಳು 7:13 · ಕನ್ನಡ ಬೈಬಲ್
ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
Cross references
ಆದಿಕಾಂಡ 45:1
ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
ಆದಿಕಾಂಡ 46:31
ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.