Home Bibles ಅಪೋಸ್ತಲರ ಕೃತ್ಯಗಳು 7:41 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 7:41 · ಕನ್ನಡ ಬೈಬಲ್

ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.

Cross references

ನಿರ್ಗಮಕಾಂಡ 32:2

ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.

ನಿರ್ಗಮಕಾಂಡ 32:17

ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 9:12

ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.

ನೆಹೆಮ್ಯ 9:18

ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ

ಕೀರ್ತನೆಗಳು 106:19

ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.

ಯೆಶಾಯ 2:8

ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.

ಯೆಶಾಯ 44:9

ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.

ಹೊಶೇಯ 9:1

ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.

ಹೊಶೇಯ 9:10

ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್‌ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.

ಹಬಕ್ಕೂಕ 2:18

ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?

ಪ್ರಕಟನೆ 9:20

ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.

Interlinear

Choose Theme