Home Bibles ಅಪೋಸ್ತಲರ ಕೃತ್ಯಗಳು 7:55 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 7:55 · ಕನ್ನಡ ಬೈಬಲ್

ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--

Cross references

ಕೀರ್ತನೆಗಳು 109:31

ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.

ಯೆಶಾಯ 6:1

ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

ಯೆಹೆಜ್ಕೇಲ 1:26

ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.

ಯೆಹೆಜ್ಕೇಲ 10:4

ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.

ಯೆಹೆಜ್ಕೇಲ 10:18

ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.

ಯೆಹೆಜ್ಕೇಲ 11:23

ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.

ಮೀಕ 3:8

ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

ಮಾರ್ಕ 16:19

ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.

ಯೋಹಾನ 12:41

ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.

ಯೋಹಾನ 14:3

ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.

ಅಪೋಸ್ತಲರ ಕೃತ್ಯಗಳು 1:10

ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.

ಅಪೋಸ್ತಲರ ಕೃತ್ಯಗಳು 2:4

ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.

ಅಪೋಸ್ತಲರ ಕೃತ್ಯಗಳು 4:8

ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,

ಅಪೋಸ್ತಲರ ಕೃತ್ಯಗಳು 6:3

ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.

ಅಪೋಸ್ತಲರ ಕೃತ್ಯಗಳು 6:5

ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು

ಅಪೋಸ್ತಲರ ಕೃತ್ಯಗಳು 6:8

ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.

ಅಪೋಸ್ತಲರ ಕೃತ್ಯಗಳು 6:10

ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.

ಅಪೋಸ್ತಲರ ಕೃತ್ಯಗಳು 13:9

ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--

2 ಕೊರಿಂಥದವರಿಗೆ 4:6

ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

2 ಕೊರಿಂಥದವರಿಗೆ 12:2

ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)

ಹೆಬ್ರಿಯರಿಗೆ 1:3

ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.

ಹೆಬ್ರಿಯರಿಗೆ 8:1

ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.

2 ಪೇತ್ರ 1:17

ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.

ಪ್ರಕಟನೆ 4:1

ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ

ಪ್ರಕಟನೆ 21:11

ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.

Interlinear

Choose Theme