Home Bibles ☰ Books ಅಪೋಸ್ತಲರ ಕೃತ್ಯಗಳು 9:18 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 9:18 · ಕನ್ನಡ ಬೈಬಲ್

ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.

Cross references

ಅಪೋಸ್ತಲರ ಕೃತ್ಯಗಳು 2:38

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೋಸ್ತಲರ ಕೃತ್ಯಗಳು 2:41

ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

ಅಪೋಸ್ತಲರ ಕೃತ್ಯಗಳು 13:12

ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.

ಅಪೋಸ್ತಲರ ಕೃತ್ಯಗಳು 13:37

ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.

ಅಪೋಸ್ತಲರ ಕೃತ್ಯಗಳು 22:16

ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.

2 ಕೊರಿಂಥದವರಿಗೆ 3:14

ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.

2 ಕೊರಿಂಥದವರಿಗೆ 4:6

ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

Interlinear

Choose Theme