ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
Cross references
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.