Home Bibles ಅಪೋಸ್ತಲರ ಕೃತ್ಯಗಳು 9:23 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 9:23 · ಕನ್ನಡ ಬೈಬಲ್

ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.

Cross references

ಯೆಹೋಶುವ 10:1

ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ

ಮತ್ತಾಯ 10:16

ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

ಅಪೋಸ್ತಲರ ಕೃತ್ಯಗಳು 9:16

ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 13:50

ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

ಅಪೋಸ್ತಲರ ಕೃತ್ಯಗಳು 14:2

ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.

ಅಪೋಸ್ತಲರ ಕೃತ್ಯಗಳು 14:19

ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

ಅಪೋಸ್ತಲರ ಕೃತ್ಯಗಳು 22:21

ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

2 ಕೊರಿಂಥದವರಿಗೆ 11:26

ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.

ಗಲಾತ್ಯದವರಿಗೆ 1:17

ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.

1 ತೆಸಲೋನಿಕದವರಿಗೆ 2:15

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

Interlinear

Choose Theme