Home Bibles ಅಪೋಸ್ತಲರ ಕೃತ್ಯಗಳು 9:32 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 9:32 · ಕನ್ನಡ ಬೈಬಲ್

ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.

Cross references

ಕೀರ್ತನೆಗಳು 16:3

ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.

ಸಾಮೇತಿಗಳು 2:8

ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.

ಮತ್ತಾಯ 27:52

ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.

ಅಪೋಸ್ತಲರ ಕೃತ್ಯಗಳು 1:8

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 8:14

ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 8:25

ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.

ಅಪೋಸ್ತಲರ ಕೃತ್ಯಗಳು 9:13

ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;

ಅಪೋಸ್ತಲರ ಕೃತ್ಯಗಳು 9:41

ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.

ಅಪೋಸ್ತಲರ ಕೃತ್ಯಗಳು 26:10

ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.

ರೋಮಾಪುರದವರಿಗೆ 1:7

ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

ಗಲಾತ್ಯದವರಿಗೆ 2:7

ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.

ಎಫೆಸದವರಿಗೆ 1:1

ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--

ಫಿಲಿಪ್ಪಿಯವರಿಗೆ 1:1

ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--

Interlinear

Choose Theme