Home Bibles ಆಮೋಸ 3:12 · ಕನ್ನಡ ಬೈಬಲ್
ಆಮೋಸ 3:12 · ಕನ್ನಡ ಬೈಬಲ್

ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.

Cross references

1 ಸಮುವೇಲ 17:34

ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.

1 ಅರಸುಗಳು 20:30

ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.

1 ಅರಸುಗಳು 20:34

ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.

1 ಅರಸುಗಳು 22:25

ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.

2 ಅರಸುಗಳು 16:9

ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.

ಯೆಶಾಯ 8:4

ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.

ಯೆಶಾಯ 17:1

ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.

ಯೆಶಾಯ 17:4

ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.

ಯೆಶಾಯ 17:7

ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.

ಯೆಶಾಯ 31:4

ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್‌ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.

ಆಮೋಸ 6:4

ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.

ಆಮೋಸ 9:2

ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

ರೋಮಾಪುರದವರಿಗೆ 11:4

ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

Interlinear

Choose Theme