Home Bibles ಆಮೋಸ 3:7 · ಕನ್ನಡ ಬೈಬಲ್
ಆಮೋಸ 3:7 · ಕನ್ನಡ ಬೈಬಲ್

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

Cross references

ಆದಿಕಾಂಡ 6:13

ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.

ಆದಿಕಾಂಡ 18:17

ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?

1 ಸಮುವೇಲ 9:15

ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--

1 ಅರಸುಗಳು 22:19

ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.

2 ಅರಸುಗಳು 3:17

ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.

2 ಅರಸುಗಳು 6:12

ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.

2 ಅರಸುಗಳು 22:13

ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.

2 ಅರಸುಗಳು 22:20

ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.

ಕೀರ್ತನೆಗಳು 25:14

ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.

ಯೆಶಾಯ 18:4

ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.

ದಾನಿಯೇಲ 9:22

ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

ದಾನಿಯೇಲ 10:21

ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.

ದಾನಿಯೇಲ 11:2

ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್‌ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.

ಯೋಹಾನ 15:15

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.

ಪ್ರಕಟನೆ 1:1

ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ

ಪ್ರಕಟನೆ 1:19

ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.

ಪ್ರಕಟನೆ 4:1

ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ

ಪ್ರಕಟನೆ 6:1

ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.

Interlinear

Choose Theme