Home Bibles ಆಮೋಸ 4:2 · ಕನ್ನಡ ಬೈಬಲ್
ಆಮೋಸ 4:2 · ಕನ್ನಡ ಬೈಬಲ್

ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.

Cross references

ಕೀರ್ತನೆಗಳು 89:35

ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.

ಕೀರ್ತನೆಗಳು 89:36

ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.

ಯೆಶಾಯ 37:29

ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.

ಯೆರೆಮಿಯ 16:16

ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.

ಯೆಹೆಜ್ಕೇಲ 34:16

ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.

ಯೆಹೆಜ್ಕೇಲ 39:4

ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.

ಆಮೋಸ 6:8

ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.

ಹಬಕ್ಕೂಕ 1:15

ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.

Interlinear

Choose Theme