Home Bibles ಆಮೋಸ 5:18 · ಕನ್ನಡ ಬೈಬಲ್
ಆಮೋಸ 5:18 · ಕನ್ನಡ ಬೈಬಲ್

ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.

Cross references

ಯೆಶಾಯ 5:19

ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!

ಯೆಶಾಯ 5:30

ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.

ಯೆಶಾಯ 9:19

ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.

ಯೆಶಾಯ 24:11

ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.

ಯೆಶಾಯ 24:18

ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).

ಯೆಶಾಯ 28:15

ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?

ಯೆಶಾಯ 58:2

ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.

ಯೆರೆಮಿಯ 17:15

ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.

ಯೆರೆಮಿಯ 30:7

ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.

ಯೆಹೆಜ್ಕೇಲ 12:22

ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್‌ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?

ಯೆಹೆಜ್ಕೇಲ 12:27

ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.

ಯೋವೇಲ 1:15

ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.

ಯೋವೇಲ 2:1

ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.

ಯೋವೇಲ 2:2

ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.

ಯೋವೇಲ 2:10

ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.

ಯೋವೇಲ 2:31

ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

ಸೆಫನ್ಯ 1:14

ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.

ಮಲಾಕಿ 3:1

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

2 ಪೇತ್ರ 3:4

ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.

2 ಪೇತ್ರ 3:10

ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.

Interlinear

Choose Theme