Home Bibles ☰ Books ಆಮೋಸ 5:9 · ಕನ್ನಡ ಬೈಬಲ್
ಆಮೋಸ 5:9 · ಕನ್ನಡ ಬೈಬಲ್

ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.

Cross references

2 ಅರಸುಗಳು 13:17

ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.

2 ಅರಸುಗಳು 13:25

ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.

ಯೆರೆಮಿಯ 37:10

ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.

ಮೀಕ 5:11

ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

ಹೆಬ್ರಿಯರಿಗೆ 11:34

ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

Interlinear

Choose Theme