Home Bibles ಆಮೋಸ 6:10 · ಕನ್ನಡ ಬೈಬಲ್
ಆಮೋಸ 6:10 · ಕನ್ನಡ ಬೈಬಲ್

ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.

Cross references

ಅಂಕೆಗಳ ಪುಸ್ತಕ 17:12

ಆಗ ಇಸ್ರಾಯೇಲ್‌ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.

1 ಸಮುವೇಲ 31:12

ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.

2 ಅರಸುಗಳು 6:33

ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.

2 ಅರಸುಗಳು 23:16

ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.

ಯೆರೆಮಿಯ 16:6

ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.

ಯೆಹೆಜ್ಕೇಲ 20:39

ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.

ಯೆಹೆಜ್ಕೇಲ 24:21

ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.

ಆಮೋಸ 5:13

ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.

ಆಮೋಸ 8:3

ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.

Interlinear

Choose Theme