Home Bibles ಆಮೋಸ 7:14 · ಕನ್ನಡ ಬೈಬಲ್
ಆಮೋಸ 7:14 · ಕನ್ನಡ ಬೈಬಲ್

ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

Cross references

1 ಅರಸುಗಳು 19:19

ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

1 ಅರಸುಗಳು 20:35

ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.

2 ಅರಸುಗಳು 2:3

ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.

2 ಅರಸುಗಳು 2:5

ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.

2 ಅರಸುಗಳು 2:7

ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.

2 ಅರಸುಗಳು 2:15

ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.

2 ಅರಸುಗಳು 4:38

ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.

2 ಅರಸುಗಳು 6:1

ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.

2 ದಿನವೃತ್ತಾಂತ 16:7

ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.

2 ದಿನವೃತ್ತಾಂತ 19:2

ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.

2 ದಿನವೃತ್ತಾಂತ 20:34

ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

ಯೋಬ 30:4

ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.

ಆಮೋಸ 1:1

ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.

ಆಮೋಸ 3:8

ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?

ಜೆಕರ್ಯ 13:5

ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.

1 ಕೊರಿಂಥದವರಿಗೆ 1:27

ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

Interlinear

Choose Theme