ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
Cross references
ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.