Home Bibles ಆಮೋಸ 8:13 · ಕನ್ನಡ ಬೈಬಲ್
ಆಮೋಸ 8:13 · ಕನ್ನಡ ಬೈಬಲ್

ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.

Cross references

ದ್ವಿತೀಯೋಪದೇಶಕಾಂಡ 32:25

ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.

ಕೀರ್ತನೆಗಳು 63:1

ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.

ಕೀರ್ತನೆಗಳು 144:12

ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.

ಯೆಶಾಯ 40:30

ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

ಯೆಶಾಯ 41:17

ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.

ಯೆರೆಮಿಯ 48:18

ಸೊದೋಮ್‌ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.

ವಿಲಾಪಗಳು 1:18

ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

ವಿಲಾಪಗಳು 2:10

ಚೀಯೋನ್‌ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.

ವಿಲಾಪಗಳು 2:21

ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.

ಹೊಶೇಯ 2:3

ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.

ಹೊಶೇಯ 2:5

ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.

ಜೆಕರ್ಯ 9:17

ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

Interlinear

Choose Theme