ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Cross references
ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.