ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
Cross references
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ
ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.