Home Bibles ದಾನಿಯೇಲ 10:1 · ಕನ್ನಡ ಬೈಬಲ್
ದಾನಿಯೇಲ 10:1 · ಕನ್ನಡ ಬೈಬಲ್

ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.

Cross references

ಆದಿಕಾಂಡ 41:32

ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.

2 ದಿನವೃತ್ತಾಂತ 36:22

ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.

ಎಜ್ರಾ 1:7

ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.

ಎಜ್ರಾ 3:7

ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.

ಎಜ್ರಾ 4:3

ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್‌ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.

ಎಜ್ರಾ 4:5

ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.

ಎಜ್ರಾ 5:13

ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.

ಎಜ್ರಾ 6:3

ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;

ಎಜ್ರಾ 6:14

ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್‌ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.

ಯೆಶಾಯ 44:28

ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.

ದಾನಿಯೇಲ 1:7

ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್‌ನೆಂದೂ ವಿಾಶಾಯೇಲನನ್ನು ಮೇಶಕ್‌ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.

ದಾನಿಯೇಲ 1:17

ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.

ದಾನಿಯೇಲ 1:21

ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.

ದಾನಿಯೇಲ 2:21

ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.

ದಾನಿಯೇಲ 4:8

ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--

ದಾನಿಯೇಲ 5:12

ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.

ದಾನಿಯೇಲ 5:17

ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.

ದಾನಿಯೇಲ 6:28

ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.

ದಾನಿಯೇಲ 8:16

ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.

ದಾನಿಯೇಲ 8:26

ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.

ದಾನಿಯೇಲ 9:22

ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

ದಾನಿಯೇಲ 9:23

ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.

ದಾನಿಯೇಲ 10:14

ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.

ದಾನಿಯೇಲ 11:2

ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್‌ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.

ದಾನಿಯೇಲ 12:4

ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.

ದಾನಿಯೇಲ 12:9

ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.

ಲೂಕ 1:20

ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.

ಪ್ರಕಟನೆ 19:9

ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.

Interlinear

Choose Theme