Home Bibles ದಾನಿಯೇಲ 10:2 · ಕನ್ನಡ ಬೈಬಲ್
ದಾನಿಯೇಲ 10:2 · ಕನ್ನಡ ಬೈಬಲ್

ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.

Cross references

ಎಜ್ರಾ 9:4

ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;

ನೆಹೆಮ್ಯ 1:4

ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--

ಕೀರ್ತನೆಗಳು 42:9

ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?

ಕೀರ್ತನೆಗಳು 43:2

ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?

ಕೀರ್ತನೆಗಳು 137:1

ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.

ಯೆಶಾಯ 66:10

ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.

ಯೆರೆಮಿಯ 9:1

ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಮತ್ತಾಯ 9:15

ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.

ರೋಮಾಪುರದವರಿಗೆ 9:2

ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.

ಯಾಕೋಬ 4:9

ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.

ಪ್ರಕಟನೆ 11:5

ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.

Interlinear

Choose Theme