ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
Cross references
ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.