ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
Cross references
ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್‌ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು