Home Bibles ದಾನಿಯೇಲ 2:13 · ಕನ್ನಡ ಬೈಬಲ್
ದಾನಿಯೇಲ 2:13 · ಕನ್ನಡ ಬೈಬಲ್

ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.

Cross references

ಎಸ್ತೇರ್ 3:12

ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.

ಕೀರ್ತನೆಗಳು 94:20

ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?

ಸಾಮೇತಿಗಳು 28:15

ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.

ಯೆಶಾಯ 10:1

ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!

ದಾನಿಯೇಲ 1:19

ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.

ದಾನಿಯೇಲ 6:9

ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು.

Interlinear

Choose Theme