ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
Cross references
ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.